ಕಾಸರಗೋಡು: sಭಾರತೀಯ ಮಜ್ಡೂರ್ ಸಂಘ(ಬಿಎಂಎಸ್)ದ 70ನೇ ಸಂಸ್ಥಾಪನಾ ವರ್ಷಾಚರಣೆ ಅಂಗವಾಗಿ ಬಿಎಂಎಸ್ ಕಾಸರಗೋಡು ಜಿಲ್ಲಾ ಸಮಿತಿ ಕಚೇರಿ ಎದುರು ಕಾರ್ಯಕ್ರಮ ಜರುಗಿತು.
ಕಾಸರಗೋಡು ಜಿಲ್ಲಾ ಕಾರ್ಯಾಲಯ ವಠಾರದಲ್ಲಿ ನಡೆದ ಸಮಾರಂಭದಲ್ಲಿ ಬಿಎಂಎಸ್ ರಾಜ್ಯ ಸಮಿತಿ ಉಪಾಧ್ಯಕ್ಷ, ವಕೀಲ ಪಿ ಮುರಳೀಧರನ್ ಧ್ವಜಾರೋಹಣ ನಡೆಸುವ ಮೂಲಕ ಉದ್ಘಾಟಿಸಿದರು. ಬಿಎಂಎಸ್ ಜಿಲ್ಲಾ ಸಮಿತಿ ಅಧ್ಯಕ್ಷ ಉಪೇಂದ್ರನ್ ಕೋಟೆಕಣಿ, ಜಿಲ್ಲಾ ಜತೆ ಕಾರ್ಯದರ್ಶಿ ದಿನೇಶ್ ಬಂಬ್ರಾಣ ಮೊದಲಾದವರು ಉಪಸ್ಥಿತರಿದ್ದರು.


