ಪೆರ್ಲ: ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢ ಶಾಲೆಯ 2025-26ನೇ ಸಾಲಿನ ಶಾಲಾ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಶಾಲಾ ಗ್ರಂಥಾಲಯದ ಸಭಾಂಗಣದಲ್ಲಿ ಜರಗಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಾರಾಯಣ ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕ ಯನ್.ಕೇಶವಪ್ರಕಾಶ್ ಅವರು 2024-25 ಶೈಕ್ಷಣಿಕ ವರ್ಷದಲ್ಲಿ ನಡೆದ ಶಾಲಾ ಚಟುವಟಿಕೆಗಳ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಪೆರ್ಲ ಶ್ರೀ ಸತ್ಯನಾರಾಯಣ ವಿದ್ಯಾಸಂಸ್ಥೆ ಆಡಳಿತ ಮಂಡಳಿಯ ಉಪಾಧ್ಯಕ್ಷ ಸದಾಶಿವ ಭಟ್ ಹರಿನಿಲಯ ಉಪಸ್ಥಿತರಿದ್ದರು. ಅಧ್ಯಾಪಕರಾದ ವೇಣುಗೋಪಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಕೃಷ್ಣ ಪ್ರಕಾಶ್ ವಂದಿಸಿದರು. ಶಾಲಾ ಶಿಕ್ಷಕಿಯರಾದ ಅಶ್ವಿನಿ,ಸುಕನ್ಯಾ,ಶ್ರಾವ್ಯ ಪ್ರಾರ್ಥನೆ ಹಾಡಿದರು.
ಈ ಸಂದರ್ಭ ರಕ್ಷಕರು ಮತ್ತು ಶಿಕ್ಷಕರನ್ನು ಒಳಗೊಂಡ 2025-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಪುರುಷೋತ್ತಮ್ ಬಿ.ಎಂ ಅಧ್ಯಕ್ಷ ಮತ್ತು ಉಮೇಶ್. ಕೆ.ಪೆರ್ಲ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಮಾತೃ ಮಂಡಳಿ ಅಧ್ಯಕ್ಷೆಯಾಗಿ ಗೀತಾ, ವಕೀಲ ರವಿಪ್ರಕಾಶ್ ಯಸ್ ಮತ್ತು ಶ್ರೀ ಸುಬ್ರಹ್ಮಣ್ಯ ಭಟ್ ಕೋಡುಮಾಡು ಅವರನ್ನು ಲೆಕ್ಕ ಪರಿಶೋಧಕರಾಗಿ ಆಯ್ಕೆ ಮಾಡಲಾಯಿತು. ರಾಜೇಶ್ ಬಜಕೂಡ್ಲು, ರಾಮಣ್ಣ ಪೂಜಾರಿ, ವೀಣಾ, ಸಫೀದ, ರಾಮ್ ಭಟ್ ಬಜಕೂಡ್ಲು ಅವರನ್ನು ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.





