ಉಪ್ಪಳ: ಪೈವಳಿಕೆ ಪಂಚಾಯಿತಿ ಕುರುಡಪದವು ನಿವಾಸಿ, ಕಾಂಗ್ರೆಸ್ ಮುಖಂಡ ದಿ. ಗಣಪತಿ ರಾವ್ ಅವರ ಪತ್ನಿ, ಕಾಂಗ್ರೆಸ್ ನೇತಾರೆ ಭಾಗೀರಥೀ ಅಮ್ಮ(89)ನಿಧನರಾದರು. ಮಹಿಳಾ ಕಾಂಗ್ರೆಸ್ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಸಮಿತಿ ಮಾಜಿ ಅಧ್ಯಕ್ಷೆ, ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕಿ ಸೇವೆಸಲ್ಲಿಸಿದ್ದರು. ಅಂಚೆ ಇಲಾಖೆಯಲ್ಲಿ ಪೋಸ್ಟ್‍ಮಾಸ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅವರು ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

