HEALTH TIPS

ಸಂಘ ಸಂಸ್ಥೆಗಳು ಜನರ ಜೀವನ ಮಟ್ಟವನ್ನು ಸುಧಾರಿಸಲು ಸಹಾಯ ಮಾಡಬೇಕು : ಡಾ.ಕೆ.ಎಸ್.ಕಾರಂತ

ಮಧೂರು: ಸಂಘ-ಸಂಸ್ಥೆಗಳು ಜನರ ಜೀವನ ಮಟ್ಟವನ್ನು ಸುಧಾರಿಸಲು, ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಸಮಾಜದ ಅಭಿವೃದ್ಧಿಗೆ ಸಹಾಯ ಮಾಡುವಲ್ಲಿ ಶ್ರಮಿಸಬೇಕು ಎಂದು ಸಾಲಿಗ್ರಾಮ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಅವರು ಕರೆನೀಡಿದರು.

ಕೂಟಮಹಾ ಜಗತ್ತು ಸಾಲಿಗ್ರಾಮ ಇದರ ಕಾಸರಗೋಡು ಅಂಗ ಸಂಸ್ಥೆಯ 200 ನೇ ಸಂಪರ್ಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. 

ಮಧೂರು ಸಮೀಪದ ಅರಂತೋಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಪ್ರಸ್ತುತ ಕಾರ್ಯಕ್ರಮದಲ್ಲಿ ಕಾಸರಗೋಡು ಅಂಗಸಂಸ್ಥೆಯ ಅಧ್ಯಕ್ಷ ಶಂಕರ ನಾರಾಯಣ ಮಯ್ಯ ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು.


ಸಾಧನೆಯ ಹಾದಿಯು ಸುಲಭವಲ್ಲ, ಛಲವಿದ್ದವರು ಮಾತ್ರ ಆ ಹಾದಿಯಲ್ಲಿ ಸಾಗಬಲ್ಲರು ಎಂಬುದಾಗಿ ಶ್ರೀ ಗುರು ನರಸಿಂಹ ಬಿಲಿಯನ್ ಫೌಂಡೇಶನ್‍ನ ಅಧ್ಯಕ್ಷ ಗೋಪಾಲಕೃಷ್ಣ ಹೇರಳೆ ಅವರು ಅಭಿಪ್ರಾಯಪಟ್ಟರು. ಕಳೆದ ಸಾಲಿನ ಎಲ್.ಎಸ್.ಎಸ್, ಎಸ್ಸೆಸ್ಸೆಲ್ಸಿ , ಹೈಯರ್ ಸೆಕೆಂಡರಿ, ದಂತ ವಿಜ್ಞಾನ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ಗಾಯತ್ರಿ ಎಂ, ಅನಘ ಮಧೂರು, ಕಾವೇರಿ, ಸಾತ್ವಿಕ್ ಕೆ, ದುರ್ಗಾ ಶಂಕರ ಅಡಿಗ, ಡಾ.ರಚನಾ ಮಯ್ಯ ಮುಂತಾದವರಿಗೆ ನಗದು ಬಹುಮಾನ ಹಾಗೂ ಸ್ಮರಣಿಕೆಗಳನ್ನು ನೀಡಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಆಂಗ್ಲ ಸಾಹಿತ್ಯದಲ್ಲಿ ಪಿಎಚ್‍ಡಿ ಪದವಿ ಪಡೆದ ಡಾ.ಪರಿಣಿತ ರವಿ ಅವರಿಗೆ ವಾಮಂಜೂರು ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಿ.ಸದಾಶಿವ ರಾವ್ ಅವರು ಶಾಲುಹೊದಿಸಿ ಸ್ಮರಣಿಕೆ ನೀಡಿ ಅಭಿನಂದಿಸಿದರು. ಇವರು ತಮ್ಮ ಪರಿಶ್ರಮದಿಂದ ಸಮಾಜಕ್ಕೆ ಮಾದರಿಯಾಗಿದ್ದಾರೆ ಮತ್ತು ಇತರರಿಗೆ ಸ್ಪೂರ್ತಿಯಾಗಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅಭಿಪ್ರಾಯಪಟ್ಟರು. ಡಾ.ಪರಿಣಿತರವಿ ಅವರು ಈ ಅಭಿನಂದನೆಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.

ಸಮಾರಂಭದಲ್ಲಿ ಖ್ಯಾತ ವಾಗ್ಮಿ, ಕಲಾ ಕುಂಚ ಕೇರಳ ಗಡಿನಾಡ ಘಟಕದ ಅಧ್ಯಕ್ಷೆ ಜಯಲಕ್ಷ್ಮಿ ಕಾರಂತ ಅವರು `ಸಂಕೀರ್ತನ' ಎಂಬ ಭಜನಾ ಸಂಗ್ರಹ ಪುಸ್ತಕ ಬಿಡುಗಡೆ ಮಾಡಿದರು. ಭಜನೆ ಎಂಬುದು ನಮ್ಮ ಆಧ್ಯಾತ್ಮಿಕ ಪ್ರಜ್ಞೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದರು. ಭಜನಾ ಸಂಕೀರ್ತನೆಯಿಂದ ಒತ್ತಡ ನಿವಾರಣೆಯಾಗುವುದು ಮತ್ತು ಮನಸ್ಸಿಗೆ ಶಾಂತಿ ಲಭಿಸುತ್ತದೆ ಎಂದೂ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಸಾಲಿಗ್ರಾಮ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರೂ ಮೀಯಪದವು ಶಾಲಾ ವ್ಯವಸ್ಥಾಪಕರೂ ಆದ ಶ್ರೀಧರ ರಾವ್, ಅರಂತೋಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರ ಮುಂತಾದವರು ಉಪಸ್ಥಿತರಿದ್ದರು. ಹಿರಿಯ ಕೂಟ ಬಂಧುಗಳಾದ ನಾರಾಯಣ ಅಡಿಗ ಅರಂತೋಡು ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಅಂಗಸಂಸ್ಥೆಯ ಕಾರ್ಯದರ್ಶಿ ನರಸಿಂಹ ಮಯ್ಯ ಎಂ. ಮಧೂರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೃಷ್ಣ ಪ್ರಸಾದ್ ಅಡಿಗ ವಂದಿಸಿದರು. ಕೋಶಾಧಿಕಾರಿ ಕೃಷ್ಣ ಕಾರಂತ ಬನ್ನೂರು ನಿರೂಪಿಸಿದರು 

ಬೆಳಿಗ್ಗೆ ಹಿರಿಯ ಕೂಟ ಬಂಧುಗಳಾದ ನಾರಾಯಣ ಅಡಿಗ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾಸರಗೋಡು ಅಂಗಸಂಸ್ಥೆಯ ಸದಸ್ಯರಿಂದ ವಿಷ್ಣುಸಹಸ್ರನಾಮ ಪಾರಾಯಣ, ಶ್ರೀ ನೃಸಿಂಹ ಅಷ್ಟೋತ್ತರ ಪಠನ ಹಾಗೂ ಭಜನಾ ಸಂಕೀರ್ತನೆ ನಡೆಯಿತು. ನಂತರ ಬಂಟ್ವಾಳ ಅಂಗ ಸಂಸ್ಥೆಯ ಸದಸ್ಯರಿಂದ ಭಜನಾ ಸಂಕೀರ್ತನೆ, ಮೀಯಪದವು ಅಂಗ ಸಂಸ್ಥೆಯ ಸದಸ್ಯರಿಂದ ಕುಣಿತ ಭಜನೆ ಜರುಗಿತು. ಬೆಳಿಗ್ಗೆ ಶ್ರೀ ಗಣಪತಿ ಹೋಮ ಮತ್ತು ಸಂಜೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ಕಾರ್ತಿಕ ಪೂಜೆ ಜರುಗಿದವು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries