ಮಂಜೇಶ್ವರ: ಬಿಜೆಪಿ ವರ್ಕಾಡಿ ಪಂಚಾಯಿತಿ ಸಮಿತಿಗಾಗಿ ದಾನಿಗಳ ಸಹಕಾರದಿಂದ ನಿರ್ಮಿಸಲಾದ ನೂತನ ಕಾರ್ಯಾಲಯದ ಉದ್ಘಾಟನೆ ಜುಲೈ 13ರಂದು ಬೆಳಗ್ಗೆ 10ಕ್ಕೆ ಜರುಗಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 8.30ಕ್ಕೆ ಗಣಪತಿ ಹವನ ನಡೆಯುವುದು.
ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ರಾಜ್ಯ, ಜಿಲ್ಲಾ, ಮಂಡಲ, ಪಂಚಾಯಿತಿ ಸಮಿತಿ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


