ಕಾಸರಗೋಡು: ಎಡರಂಗ ಸರ್ಕಾರದ ದುರಾಡಳಿತ ಹಾಗೂ ಆರೋಗ್ಯ ಕ್ಷೇತ್ರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮುಸ್ಲಿಂ ಯೂತ್ ಲೀಗ್ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಾಞಂಗಾಡ್‍ನಲ್ಲಿರುವ ಜಿಲ್ಲಾ ವೈದ್ಯಾಧಿಕಾರಿ(ಡಿಎಂಒ) ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು.
ಧರಣಿಗೂ ಮೊದಲು ಕಾಞಂಗಾಡಿನ ಆರಂಗಡಿ ಪ್ರದೇಶದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಜಿಲ್ಲಾ ವೈದ್ಯಾಧಿಕಾರಿ ಕಚೇರಿ ವಠಾರಕ್ಕೆ ತಲುಪುತ್ತಿದ್ದಂತೆ ಪೆÇಲೀಸರು ತಡೆಯೊಡ್ಡಿದರು. ಈ ಸಂದರ್ಭ ಪೆÇಲೀಸರು ಮತ್ತು ಕಾರ್ಯಕರ್ತರ ನಡುವೆ ಘರ್ಷಣೆ ನಡೆದು, ಪೆÇಲೀಸರು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಧರಣಿಯನ್ನು ಯೂತ್‍ಲೀಗ್ ರಾಜ್ಯ ಸಮಿತಿ ಉಪಾಧ್ಯಕ್ಷ ಅಶ್ರಫ್ ಎಡನೀರ್ ಉದ್ಘಾಟಿಸಿ ಮಾತನಾಡಿ, ಎಡರಂಗ ಸರ್ಕಾರದ ದುರಾಡಳಿತದಿಂದ ರಾಜ್ಯ ಆರ್ಥಿಕ ಸಂಕಷ್ಟದಿಂದ ಬಳಲುವಂತಾಗಿದೆ. ರಾಜ್ಯದಲ್ಲಿ ಸಾವಿರಾರು ಬಡ ಜನರು ಅವಲಂಬಿಸಿರುವ ಸರ್ಕಾರಿ ಆಸ್ಪತ್ರೆಗಳ ಸ್ಥಿತಿ ಶೋಚನೀಯವಾಗಿದೆ. ವೈದ್ಯರು ಮತ್ತು ದಾದಿಯರು ಸೇರಿದಂತೆ ಸಿಬ್ಬಂದಿ ನೇಮಕಾತಿಯಿಲ್ಲದೆ, ವೈದ್ಯಕೀಯ ಕ್ಷೇತ್ರದ ಚಟುವಟಿಕೆ ಅಯೋಮಯವಾಗಿದೆ. ಕಾಂಗ್ರೆಸ್ ನೇತೃತ್ವದ ಐಕ್ಯರಂಗ ಸರ್ಕಾರದ ಕಾಲಾವಧಿಯಲ್ಲಿ ಉಕ್ಕಿನಡ್ಕದಲ್ಲಿ ಆರಂಭಿಸಲಾಗಿರುವ ಕಾಸರಗೋಡು ವೈದ್ಯಕೀಯ ಕಾಲೇಜು ಅಸ್ಪತ್ರೆ ಕಟ್ಟಡ ಕಾಮಗಾರಿ ಪೂರ್ತಿಗೊಳಿಸುವಲ್ಲಿ ಎಡರಂಗ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಜಿಲ್ಲಾಧ್ಯಕ್ಷ ಅಜೀಜ್ ಕಳತ್ತೂರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ವಕೀಲೆ ಫಾತಿಮಾ ತಹ್ಲಿಯಾ ಮುಖ್ಯ ಭಾಷಣ ಮಾಡಿದರು. ಪ್ರಧಾನ ಕಾರ್ಯದರ್ಶಿ ಕೆ.ಕೆ. ಬದ್ರುದ್ದೀನ್, ಎಂ.ಎ.ನಜೀಬ್, ಶಂಸುದ್ದೀನ್ ಆವಿಯಿಲ್, ರಹಮಾನ್ ಗೋಲ್ಡನ್, ನೌಶಾದ್ ಎಂ.ಪಿ., ಎ.ಹಮೀದ್ ಹಾಜಿ, ಮುಬಾರಕ್ ಹಸೈನಾರ್ ಹಾಜಿ ಮೊದಲಾದವರು ನೇತೃತ್ವ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಜಹೀರ್ ಆಸಿಫ್ ಸ್ವಾಗತಿಸಿದರು.





