ಕಾಸರಗೋಡು: ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ ಶಿಲಾಮಯ ಗರ್ಭಗುಡಿ ನಿರ್ಮಾಣದ ಪೂರ್ವಭಾವಿಯಾಗಿ ಪಾದುಕಾನ್ಯಾಸ ಕಾರ್ಯಕ್ರಮ ಕ್ಷೇತ್ರ ವಠಾರದಲ್ಲಿ ನಡೆಯಿತು. ಶಿಲ್ಪಿ ಬೆದ್ರಡ್ಕ ರಮೇಶ ಕಾರಂತ ಅವರು ನೇತೃತ್ವ ವಹಿಸಿದ್ದರು. ಸಾಂಪ್ರದಾಯಿಕ ಚಟುವಟಿಕೆಗಳ ನಂತರ ಶಿಲಾಮಯ ಗರ್ಭಗುಡಿಯ ನಿರ್ಮಾಣ ಹೊಣೆ ಹೊತ್ತಿರುವ ಮುರುಡೇಶ್ವರದ ಅಣ್ಣಪ್ಪ ಜಿ. ನಾಯಕ್ ಅವರಿಗೆ ಕಾಮಗಾರಿ ಹೊಣೆ ಹಸ್ತಾಂತರಿಸಿದರು.
ಜೀರ್ಣೋದ್ಧಾರ ಸಮಿತಿಯ ಗೌರವಧ್ಯಕ್ಷ ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಈ ಸಂಬಂಧ ಸಾಮೂಹಿಕ ಪ್ರಾರ್ಥನೆ ನಡೆಯಿತು. ಅಧ್ಯಕ್ಷ ಮೋಹನ್ ರಾಜ್ ಕಾಳ್ಯಂಗಾಡು, ಪ್ರಧಾನ ಕಾರ್ಯದರ್ಶಿ ಹರೀಶ್ ಕೊಳ್ಕೆಬೈಲು, ಕೋಶಾಧಿಕಾರಿ ಶಾಂತಕುಮಾರ್ ಮುಂಡಿತ್ತಡ್ಕ, ಆಡಳಿತೆ ಮೊಕ್ತೇಸರ ಅಚ್ಯುತ ಕೆ., ಧರ್ಮದರ್ಶಿ ನಾರಾಯಣ ಪೂಜಾರಿ, ರಘು ಮೀಪುಗುರಿ, ಲವ ಮೀಪುಗುರಿ, ರಂಜಿತ್ ಮನ್ನಿಪ್ಪಾಡಿ, ದುಗ್ಗಪ್ಪ ಕಾಳ್ಯಂಗಾಡು, ಆನಂದ ಮೀಪುಗುರಿ, ದಯಾನಂದ ಕಾಳ್ಯಂಗಾಡು, ಮಾತೃಸಮಿತಿ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.
ಶಿಲಾಮಯ ಗರ್ಭಗುಡಿಯ ನಿರ್ಮಾಣ ಕಾರ್ಯವನ್ನು ಒಂದು ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲು ಯೋಜನೆಯಿರಿಸಿಕೊಳ್ಳಲಾಗಿದ್ದು, ನಿರ್ಮಾಣ ಕಾರ್ಯ ಶೀಘ್ರ ಪೂರ್ತಿಗೊಳಿಸಲು ತೀರ್ಮಾನಿಸಲಾಯಿತು.





