ಮಂಜೇಶ್ವರ : ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಗ್ರಾ.ಪಂ. ಸದಸ್ಯ ಜನಾರ್ಧನ ಪೂಜಾರಿ ಕುಳೂರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಜೂನಿಯರ್ ಹೆಲ್ತ್ ಇನ್ಸ್ಪೆಕ್ಟರ್ ನಝೀಲ ಹಾಗೂ ಎಂ.ಎಲ್.ಎಸ್.ಪಿ. ನರ್ಸ್ ಅಶ್ವಿನಿ ವಿಶೇಷ ಅತಿಥಿಗಳಾಗಿ ಆಗಮಿಸಿ ಮಕ್ಕಳಿಗೆ ಮಾದಕ ದ್ರವ್ಯದ ಕುರಿತಾದ ವಿಶೇಷ ತರಗತಿಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಮಾಲತಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಶಿಕ್ಷಕಿ ನಯನ ಮಾದಕ ದ್ರವ್ಯ ವಿರುದ್ಧವಾದ ಪ್ರತಿಜ್ಞೆಯನ್ನು ಬೋಧಿಸಿದರು.
ಶಿಕ್ಷಕಿ ಸೌಮ್ಯ ಪಿ. ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು. ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಭಾಗವಾಗಿ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಮಕ್ಕಳಿಗೆ ಝುಂಬಾ ನೃತ್ಯ ನಡೆಸಿಕೊಟ್ಟರು.




.jpg)
.jpg)
