ಇಂದು ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ
ತಿರುವನಂತಪುರಂ: ಇಂದಿನಿಂದ ರಾಜ್ಯದಲ್ಲಿ ಮಳೆ ತೀವ್ರಗೊಂಡಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ನಾಲ್ಕು ದಿನಗಳವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ.
ಮಳೆಯಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.
ಇಂದು ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.
ನಾಳೆ(ಬುಧವಾರ) ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ, ಗುರುವಾರ ಇಡುಕ್ಕಿ, ಎರ್ನಾಕುಳಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಶುಕ್ರವಾರ ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಎಚ್ಚರಿಕೆ ನೀಡಲಾಗಿದೆ.
ಹಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. ಕೇಂದ್ರ ಹವಾಮಾನ ಇಲಾಖೆಯ ಪ್ರಕಾರ, 24 ಗಂಟೆಗಳಲ್ಲಿ 115.6 ಮಿ.ಮೀ ನಿಂದ 204.4 ಮಿ.ಮೀ ವರೆಗೆ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.


