ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನಲ್ಲಿ ಎಸ್‍ಸಿ ಮತ್ತು ಎಸ್‍ಟಿ ವರ್ಗಗಳಿಗೆ ಎಂ.ಕಾಂ ವಿಭಾಗದಲ್ಲಿ ಕೆಲವು ಸೀಟುಗಳು ಲಭ್ಯವಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 16 ರಂದು ಬೆಳಿಗ್ಗೆ 10.30 ಕ್ಕೆ ಪೆರಿಯಾ ಕ್ಯಾಂಪಸ್‍ನ ವಾಣಿಜ್ಯ ವಿಭಾಗದ ಅಂತಾರಾಷ್ಟ್ರೀಯ ವ್ಯವಹಾರ ಅಧ್ಯಯನ ವಿಭಾಗದಲ್ಲಿ ನಡೆಯುವ ಸ್ಪಾಟ್ ಅಡ್ಮಿಶನ್‍ನಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ(9846329021)ಸಂಪರ್ಕಿಸಬಹುದಾಘಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.cukerala.ac.in ಗೆ ಭೇಟಿ ನೀಡುವಂತೆ ಪ್ರಕಟಣೆ ತಿಳಿಸಿದೆ.

