ಕುಂಬಳೆ: ಹದಿನಾರರ ಹರೆಯದ ಬಾಲಕಗೆ ಸಲಿಂಗ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಮದ್ರಸಾ ಶೀಕ್ಷಕ ಸಿನಾನ್ ಎಂಬಾತನ ವಿರುದ್ಧ ಕುಂಬಳೆ ಠಾಣೆ ಪೊಲೀಸರು ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ.
ಶಾಲೆಯಲ್ಲಿ ನಡೆದ ಕೌನ್ಸೆಲಿಂಗ್ ಸಂದರ್ಭ ಬಾಲಕ ಶಿಕ್ಷಕರಲ್ಲಿ ವಿಷಯ ಬಹಿರಂಗಪಡಿಸಿದ್ದನು. 2022ರಿಂದ 2023ರ ಅವಧಿಯಲ್ಲಿ ವಿವಿಧ ದಿವಸಗಳಲ್ಲಾಗಿ ತನ್ನನ್ನು ವಿವಿಧ ಸ್ಥಳಗಳಿಗೆ ಕರೆದೊಯ್ದು ಕಿರುಕುಳ ನೀಡಿರುವುದಾಗಿ ದೂರರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ಬಾಲಕಗೆ ಕಾಸರಗೋಡು, ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆ ಇನ್ನೂ ಹಲವರು ಕಿರುಕುಳ ನೀಡಿರುವ ಬಗ್ಗೆಯೂ ದೂರು ದಾಖಲಾಗಿದೆ.ಈ ಬಗ್ಗೆ ಒಟ್ಟು ಮೂರು ಪೋಕ್ಸೋ ಪ್ರಕರಣ ದಾಖಲಾಗಿದೆ.


