ಬರ್ಲಿನ್: ದಕ್ಷಿಣ ಜರ್ಮನಿಯಲ್ಲಿ ಪ್ರಯಾಣಿಕ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಮೂವರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮ್ಯೂನಿಚ್‌ನಿಂದ 158 ಕಿಲೋಮೀಟರ್ ದೂರದಲ್ಲಿರುವ ರೀಡ್ಲಿಂಗೆನ್ ಬಳಿ ಅವಘಡ ಸಂಭವಿಸಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಷ್ಟು ಜನರು ಗಾಯಗೊಂಡಿದ್ದಾರೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಹಳಿ ತಪ್ಪಿರುವ ಬೋಗಿಗಳಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ.
'ಘಟನೆ ನಡೆದ ಸ್ಥಳದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ರೈಲು ಹಳಿ ತಪ್ಪಿರುವ ಸಾಧ್ಯತೆ ಇದೆ. ಆದಾಗ್ಯೂ, ಘಟನೆ ಸಂಬಂದ ತನಿಖೆ ನಡೆಸಲಾಗುತ್ತಿದೆ ಎಂದು ಬಾಡೆನ್ ವುರ್ಟೆನ್‌ಬರ್ಗ್‌ನ ಸಚಿವ ಥಾಮಸ್ ಸ್ಟ್ರೋಬಲ್ ಹೇಳಿದ್ದಾರೆ.



