HEALTH TIPS

ಪಂಜಾಬ್‌: ಭಿಕ್ಷೆ ಬೇಡುವ ಮಕ್ಕಳ ಡಿಎನ್‌ಎ ಪರೀಕ್ಷೆ

ಚಂಡೀಗಢ: ವಯಸ್ಕರೊಂದಿಗೆ ಭಿಕ್ಷೆ ಬೇಡುವ ಮಕ್ಕಳ ಡಿಎನ್‌ಎ ಪರೀಕ್ಷೆ ನಡೆಸಿ, ಅವರ ನಡುವಿನ ಸಂಬಂಧದ ಬಗ್ಗೆ ಪರಿಶೀಲನೆ ನಡೆಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಪಂಜಾಬ್‌ ಸರ್ಕಾರ ಸೂಚಿಸಿದೆ.

ಮಕ್ಕಳ ಕಳ್ಳಸಾಗಾಣಿಕೆ ಮತ್ತು ಶೋಷಣೆ ತಡೆಯುವ ಉದ್ದೇಶದಿಂದ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ.

ಸಾಮಾಜಿಕ ಭಧ್ರತೆ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಬಲಜೀತ್‌ ಕೌರ್‌ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಡಿಎನ್‌ಎ ಪರೀಕ್ಷೆ ಫಲಿತಾಂಶ ಲಭ್ಯವಾಗುವವರೆಗೆ ಮಗುವನ್ನು ಮಕ್ಕಳ ಕಾಳಜಿ ಕೇಂದ್ರದಲ್ಲಿ ಇರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ವಯಸ್ಕ ವ್ಯಕ್ತಿಗೂ ಮಗುವಿಗೂ ಯಾವುದೇ ಸಂಬಂಧ ಇಲ್ಲದಿರುವುದು ಪತ್ತೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries