ಕಾಸರಗೋಡು: ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದ ಬಗ್ಗೆ ತೋರುತ್ತಿರುವ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಜುಲೈ 7ರಂದು ಕಾಸರಗೋಡು ಜನರಲ್ ಆಸ್ಪತ್ರೆ ವಠಾರದಲ್ಲಿ ಪ್ರತಿಭಟನಾ ಧರಣಿ ನಡೆಯುವುದು.
ಧರಣಿಯ ಪೂರ್ವಭಾವಿಯಾಗಿ ಬೆಳಗ್ಗೆ 10ಕ್ಕೆ ಕಾಸರಗೋಡಿನ ಹೊಸ ಬಸ್ ನಿಲ್ದಾಣ ವಠಾರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದ್ದು, ರಾಜ್ಯ ಮತ್ತು ಜಿಲ್ಲಾ ನಾಯಕರು ಧರಣಿಯಲ್ಲಿ ಪಾಲ್ಗೊಳ್ಳಲಿರುವುದಾಗಿ ಪ್ರಕಟಣೆ ತಿಳಿಸಿದೆ.




