ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಶಾಲಾ ಹಳೆ ವಿದ್ಯಾರ್ಥಿ ಸಂಘ ಗ್ರಂಥಾಲಯ ಮೀಯಪದವು ಇದರ ಆಶ್ರಯದಲ್ಲಿ ಪಿ.ಎನ್ ಪಣಿಕ್ಕರ್ ಸಂಸ್ಮರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಗ್ರಂಥಾಲಯ ಅಧ್ಯಕ್ಷ ಸತೀಶ ಬಿ. ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಕಾರ್ಯದರ್ಶಿ ಡಿ. ಕಮಲಾಕ್ಷ ಕಾರ್ಯಕ್ರಮವನ್ನ ಉದ್ಘಾಟಿಸಿದರು. ಮೀಂಜ ನೇತೃತ್ವ ಸಮಿತಿ ಕನ್ವೀನರ್ ರಾಮಚಂದ ಟಿ. ಗ್ರಂಥಾಲಯ ಉಪಾಧ್ಯಕ್ಷ ರಾಮಚಂದ್ರ ಮಾಸ್ತರ್, ವಿದ್ಯಾವರ್ಧಕ ಹೈಸ್ಕೂಲ್ ಮೀಯಪದವಿನ ಮುಖ್ಯ ಶಿಕ್ಷಕಿ ಮೃದುಲಾ ಟೀಚರ್, ಅಧ್ಯಾಪಕ ಮಹಾಬಲೇಶ್ವರ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ಡಾ. ಕೆ.ಅಪ್ಪು ಕುಟ್ಟನ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಶುಭ ಹಾರೈಸಿದರು. ಎಸ್.ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆಗಳನ್ನಿತ್ತು ಗೌರವಿಸಲಾಯಿತು. ಸುರೇಶ ಬಂಗೇರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು ಗ್ರಂಥಪಾಲಕಿ ತುಳಸಿ ವಂದಿಸಿದರು.

.jpg)
