ಕಾಸರಗೋಡು: ಕೇಂದ್ರ ಹವಾಮಾನ ಇಲಾಖೆ ಜುಲೈ 18 ರಂದು ಕಾಸರಗೋಡು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದೆ, ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ ಮತ್ತು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ, ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಜುಲೈ 18, ಶುಕ್ರವಾರ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲೆಯ ಶಾಲೆಗಳು, ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಕೇಂದ್ರೀಯ ವಿದ್ಯಾಲಯಗಳು, ಬೋಧನಾ ಕೇಂದ್ರಗಳು, ಮದರಸಾಗಳು, ಅಂಗನವಾಡಿಗಳು ಮತ್ತು ವಿಶೇಷ ತರಗತಿಗಳಿಗೆ ರಜೆ ಅನ್ವಯಿಸುತ್ತದೆ.
ಈ ಹಿಂದೆ ಘೋಷಿಸಲಾದ ಎಲ್ಲಾ ಪರೀಕ್ಷೆಗಳು (ವೃತ್ತಿಪರ, ವಿಶ್ವವಿದ್ಯಾಲಯ ಮತ್ತು ಇತರ ಇಲಾಖಾ ಪರೀಕ್ಷೆಗಳು ಸೇರಿದಂತೆ) ನಿಗದಿಯಂತೆ ನಡೆಯಲಿವೆ. ಪರೀಕ್ಷಾ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ:
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕಾಸರಗೋಡು, ದೂರವಾಣಿ: +91 94466 01700 ಸಂಪರ್ಕಿಸಬಹುದು.
ವಿಶೇಷ ಸೂಚನೆ:
ಗ್ರಾಮೀಣ ಪ್ರದೇಶದ ಪುಟಾಣಿಗಳನ್ನು ಭಾರೀ ಮಳೆಯ ಹಿನ್ನೆಲೆಯಲ್ಲಿ ಮನೆಯಿಂದ ಹೊರ ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು. ಕೆರೆ, ಕಲ್ಲಿನ ಕ್ವಾರೆಗಳಲ್ಲಿ ಈಜುವುದು, ಇತರ ಜಲಮೂಲಗಳ ಮೂಲಕ ಆಟವಾಡುವುದು, ದಾಟುವುದನ್ನು ನಿಯಂತ್ರಿಸಬೇಕು. ವೃದ್ದರು, ಮಹಿಳೆಯರು, ಮಕ್ಕಳು ಮಳೆಗೆ ನೆನೆಯದಂತೆ ಜಾಗ್ರತೆ ವಹಿಸಬೇಕು. ತುರ್ತು ಆರೋಗ್ಯ ಸಮಸ್ಯೆಗಳಿದ್ದಾಗ ಅಧಿಕೃತರ ಸಹಾಯ ಕೂಡಲೇ ಪಡೆಯಬೇಕು.




.jpeg)
.jpeg)
