ಮಧೂರು: ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆ ನೇತೃತ್ವದಲ್ಲಿ ಮುಂಚೂಣಿಯಲ್ಲಿದ್ದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹಾಗು ನವೀಕರಣ ಸಮಿತಿಯ ಉಪಾಧ್ಯಕ್ಷರಾಗಿದ್ದ ಡಾ.ಬಿ.ಎಸ್.ರಾವ್ ಅವರ ಸಂಸ್ಮರಣೆ ಶ್ರೀ ಕ್ಷೇತ್ರದ ಪರಿಸರದಲ್ಲಿ ಜು.30 ರಂದು ಬುಧವಾರ ಬೆಳಗ್ಗೆ 10ಕ್ಕೆ ಜರಗಲಿದೆ. ಮಧೂರು ದೇವಸ್ಧಾನದ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ನವೀಕರಣದಲ್ಲಿ, ಮಹಾದಾನಿಗಳಾಗಿ ಸಹಕರಿಸಿರುವ ಡಾ.ಬಿ.ಎಸ್.ರಾವ್ ಅವರ ಶ್ರದ್ಧಾಂಜಲಿ ಸಭೆಗೆ ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ವಿವಿಧ ವಲಯ ಸಮಿತಿಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಲಾಗಿದೆ.




