ಜುಲೈ 21 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗಿ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಗಳನ್ನು ದಾಖಲಿಸಲು ಸೂಚಿಸಲಾಗಿದೆ.
ಈ ಬಗ್ಗೆ ಎರಡೂ ಕಂಪನಿಗಳಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
ಈ ಆಯಪ್‌ಗಳು ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದಿಂದ ಕಾನೂನು ಬಾಹಿರವಾಗಿ ಕೋಟ್ಯಂತರ ರೂಪಾಯಿ ಗಳಿಸಿವೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಪ್ರಕರಣ ಸಂಬಂಧ ಕಳೆದ ವಾರ ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿತ್ತು.
ನಟಿಯರಾದ ಮಂಚು ಲಕ್ಷ್ಮಿ, ನಿಧಿ ಅಗರ್ವಾಲ್, ಪ್ರಣೀತಾ ಸುಭಾಶ್, ಅನನ್ಯಾ ನಾಗಲ್ಲಾ, ಟಿ.ವಿ ನಿರೂಪಕಿ ಶ್ರೀಮುಖಿ ಹಾಗೂ ತೆಲಂಗಾಣದ ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳು, ಯುಟ್ಯೂಬರ್‌ಗಳ ಹೆಸರನ್ನೂ ಪ್ರಕರಣದಲ್ಲಿ ಹೆಸರಿಸಲಾಗಿತ್ತು.




