HEALTH TIPS

ಪಾಕಿಸ್ತಾನವನ್ನು ಉಲ್ಲೇಖಿಸದೇ ಪಹಲ್ಗಾಮ್‌ ದಾಳಿ ಖಂಡಿಸಿದ 'ಬ್ರಿಕ್ಸ್‌' ನಾಯಕರು

ರಿಯೊ ಡಿ ಜನೈರೊ: ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸದೇ ಏಪ್ರಿಲ್‌ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳ ನಾಯಕರು ಖಂಡಿಸಿದ್ದಾರೆ.

ಭಾನುವಾರ ಇಲ್ಲಿ ಆರಂಭಗೊಂಡಿರುವ ಎರಡು ದಿನಗಳ ಬ್ರಿಕ್ಸ್‌ ಶೃಂಗಸಭೆಯ ಮೊದಲ ದಿನ, ಭಯೋತ್ಪಾದನೆ, ಜಾಗತಿಕ ಸುಂಕ ಸಮರ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿಶ್ವ ನಾಯಕರು ಚರ್ಚಿಸಿದ್ದಾರೆ.

'2025ರ ಏಪ್ರಿಲ್‌ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಈ ದಾಳಿಯಲ್ಲಿ 26 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಗಡಿಯಾಚೆಗಿನ ಭಯೋತ್ಪಾದನೆ, ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ಒದಗಿಸುವುದು ಸೇರಿದಂತೆ ಉಗ್ರವಾದದ ವಿರುದ್ಧ ಕ್ರಮ ಕೈಗೊಳ್ಳುವ ನಮ್ಮ ಬದ್ಧತೆಯನ್ನು ಪುನರುಚ್ಛರಿಸುತ್ತೇವೆ' ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಈ ಕುರಿತ ದ್ವಂದ್ವ ಅಭಿಪ್ರಾಯಗಳನ್ನು ತಿರಸ್ಕರಿಸಲು ನಾವು ಒತ್ತಾಯಿಸುತ್ತೇವೆ' ಎಂದು ಹೇಳಿದ್ದಾರೆ.

ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂದು ಬಹಳ ಹಿಂದಿನಿಂದಲೂ ಭಾರತ ಆರೋಪಿಸುತ್ತಿದೆ. ಪಹಲ್ಗಾಮ್‌ ದಾಳಿ ಹಿಂದೆಯು ಪಾಕಿಸ್ತಾನ ಕೈವಾಡವಿದೆ ಎಂದು ಆರೋಪಿಸಿದ್ದ ಭಾರತ, ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ 9 ಸ್ಥಳಗಳ ಮೇಲೆ ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ ನಡೆಸಿತ್ತು.

ಜೂನ್‌ 26ರಂದು ಚೀನಾದ ಚಿಂಗ್ಡವ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ ಸಭೆಯಲ್ಲಿ ಭಾಗವಹಿಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಗಡಿಯಾಚೆಗಿನ ಭಯೋತ್ಪಾದನೆ ಕುರಿತು ಸ್ಪಷ್ಟವಾಗಿ ಉಲ್ಲೇಖಿಸಿದ ಕಾರಣ ಸಭೆಯ ಜಂಟಿ ಹೇಳಿಕೆಗೆ ಸಹಿ ಹಾಕಲು ನಿರಾಕರಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries