ಕಾಸರಗೋಡು: ಜಿಲ್ಲೆಯಲ್ಲಿ ಅಲ್ಪ ತಗ್ಗಿದ್ದ ಮಳೆ, ಭಾನುವಾರ ಮಧ್ಯಾಹ್ನದ ನಂತರ ಮತ್ತೆ ಬಿರುಸುಗೊಂಡಿದೆ. ಮುಂದಿನ ಐದು ದಿವಸಗಳ ಕಾಲ ಮಳೆ ಬಿರುಸುಗೊಳ್ಳಲಿರುವುದಾಗಿ ಕೇಂದ್ರ ಹವಾಮಾನ ಇಲಾಖೆ ಸೂಚನೆ ನೀಡಿದೆ. ಮುಂದಿನ 24ತಾಸುಗಳೊಳಗೆ 115.6ರಿಂದ 204.4ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಕಾಸರಗೋಡು, ಕಣ್ಣೂರು, ಕೋಯಿಕ್ಕೋಡ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.


