ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಲಾಯಿತು. ಹಿರಿಯ ಸಂಸ್ಕøತ ಶಿಕ್ಷಕ ಬಾಲಕೃಷ್ಣ ಶರ್ಮ ಅನಂತಪುರ ಅತಿಥಿಗಳಾಗಿ ಪಾಲ್ಗೊಂಡು ಗುರುವಿನ ಹಾಗೂ ಗುರುಪೂರ್ಣಿಮೆಯ ಮಹತ್ವವನ್ನು ವಿಧ್ಯಾರ್ಥಿಗಳಿಗೆ ವಿವರಿಸಿದರು. ವಿದ್ಯಾರ್ಥಿಗಳೆಲ್ಲರೂ ಶ್ರೀಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗುರುಗಳ ಆಶೀರ್ವಾದವನ್ನು ಪಡೆದರು.
ಮುಖ್ಯೋಪಾಧ್ಯಯ ಶ್ಯಾಮ್ ಭಟ್ ಧರ್ಬೆಮಾರ್ಗ,ಸಹ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಅಧ್ಯಾಪಿಕೆ ಪ್ರೇಮಲತಾ ಕಾರ್ಯಕ್ರಮ ನಿರೂಪಿಸಿದರು.

.jpg)
