ಕಾಸರಗೋಡು: ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜುಲೈ 20ರ ವರೆಗೂ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಶನಿವಾರ ಮಳೆ ಪ್ರಮಾಣ ಅಲ್ಪ ತಗ್ಗಿದ್ದ ಹಿನ್ನೆಲೆಯಲ್ಲಿ ಹೊಳೆಗಳಲ್ಲಿ ನೀರಿನ ಮಟ್ಟ ಅಲ್ಪ ಇಳಿಕೆಯಾಗಿತ್ತು.
ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಭಾನುವಾರ ಕಾರ್ಯಾಚರಿಸುವ ಶಿಕ್ಷಣ ಸಂಸ್ಥೆಗಳಿಗೂ ಕಡ್ಡಾಯವಾಗಿ ರಜೆ ಸಾರಲಾಗಿದೆ. ಪೂರ್ವನಿಗದಿತ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಜಿಲ್ಲೆಯಲ್ಲಿ ಜುಲೈ 21ರಂದು ಆರೆಂಜ್, 22ಹಾಗೂ 23ರಂದು ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ತ್ರಿಕ್ಕನ್ನಾಡ್ ಹಾಗೂ ಕೋಟಿಕುಳಂ ಪ್ರದೇಶದಲ್ಲಿ ಸಮುದ್ರಕೊರೆತ ಮುಂದುವರಿದಿದೆ.


