ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನಲ್ಲಿ ಎಸ್‍ಸಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನದೊಂದಿಗೆ ನಾಗರಿಕ ಸೇವಾ ಪರೀಕ್ಷಾ(ಸಿವಿಲ್ ಸರ್ವೀಸ್) ತರಬೇತಿಯನ್ನು ನೀಡುವ ಡಾ. ಅಂಬೇಡ್ಕರ್ ಸೆಂಟರ್ ಆಫ್ ಎಕ್ಸಲೆನ್ಸ್ (ಡಿಎಸಿಇ) ನಲ್ಲಿ ಎಸ್‍ಸಿ ವಿಭಾಗದಲ್ಲಿ ಸೀಟುಗಳು ತೆರವಾಗಿದೆ.
ಅಭ್ಯರ್ಥಿಗಳು ಪದವಿ ಅಥವಾ ತತ್ಸಮಾನ ಪದವಿಯಲ್ಲಿ ಶೇ. 50ರಷ್ಟು ಅಂಕ ಪಡೆದಿರಬೇಕು. ಅಭ್ಯರ್ಥಿಗಳಿಗೆ ಮಾಸಿಕ 4ಸಾವಿರ ರೂ. ವಿದ್ಯಾರ್ಥಿವೇತನ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಜುಲೈ 30 ರಂದು ಪೆರಿಯಾ ಕ್ಯಾಂಪಸ್‍ನ ಟೀಚಿಂಗ್ ಬ್ಲಾಕ್ 1 ರಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಸ್ಪಾಟ್ ಸಂದರ್ಶನದಲ್ಲಿ ಭಾಗವಹಿಸಬಹುದು.ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಪ್ರವೇಶಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ, ವಿಶ್ವವಿದ್ಯಾಲಯದ ವೆಬ್‍ಸೈಟ್ www.cukerala.ac.in ಗೆ ಭೇಟಿ ನೀಡಬಹುದು. ದೂರವಾಣಿ(0467 2309358)ಮೂಲಕ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


