ಮುಂಬೈ: ಅನಿಲ್ ಅಂಬಾನಿ ಸಮೂಹ ಕಂಪನಿಗಳು ಮತ್ತು ಯೆಸ್ ಬ್ಯಾಂಕ್ ವಿರುದ್ಧದ ₹ 3 ಕೋಟಿ ಬ್ಯಾಂಕ್ ಸಾಲ ವಂಚನೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಗುರುವಾರ ಏಕಕಾಲದಲ್ಲಿ ಹಲವು ಕಡೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮುಂಬೈ ಮತ್ತು ದೆಹಲಿಯಲ್ಲಿ 50 ಕಂಪನಿಗಳ 35 ಕ್ಕೂ ಹೆಚ್ಚು ಸ್ಥಳಗಳಲ್ಲಿ, ಸುಮಾರು 25 ವ್ಯಕ್ತಿಗಳನ್ನು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಶೋಧಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
2017 ಮತ್ತು 2019 ರ ನಡುವೆ ಯೆಸ್ ಬ್ಯಾಂಕಿನಿಂದ ಸುಮಾರು ₹ 3 ಸಾವಿರ ಕೋಟಿ ಅಕ್ರಮ ಸಾಲ ವರ್ಗಾವಣೆ ಆರೋಪಗಳನ್ನು ತನಿಖೆ ನಡೆಸಲಾಗುತ್ತಿದೆ ಎಂದು ಇ.ಡಿ ಮೂಲಗಳು ತಿಳಿಸಿವೆ.
ಸಾಲ ಮಂಜೂರು ಮಾಡುವ ಮೊದಲು, ಯೆಸ್ ಬ್ಯಾಂಕ್ ಪ್ರವರ್ತಕರು ಹಣವನ್ನು ಪಡೆದಿದ್ದಾರೆ ಎಂದು ಇ.ಡಿ ಪತ್ತೆ ಹಚ್ಚಿದೆ ಎಂದು ಮೂಲಗಳು ತಿಳಿಸಿವೆ.
ಈ 'ಲಂಚ' ಮತ್ತು ಸಾಲದ ಈ ಸಂಬಂಧವನ್ನು ಇ.ಡಿ ತನಿಖೆ ನಡೆಸುತ್ತಿದೆ.
ರಿಲಯನ್ಸ್ ಅನಿಲ್ ಅಂಬಾನಿ ಸಮೂಹ ಕಂಪನಿಗಳಿಗೆ ಸಾಲ ನೀಡುವ ವೇಳೆ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎನ್ನುವ ಆರೋಪದ ಬಗ್ಗೆ ಇ.ಡಿ ತನಿಖೆ ನಡೆಸುತ್ತಿದೆ.




