ಕಾಸರಗೋಡು: ತ್ಯಾಜ್ಯ ಮುಕ್ತ ನವ ಕೇರಳ ಅಭಿಯಾನದ ಅಂಗವಾಗಿ ಶುಚೀಕರಣ ಕಾರ್ಯ ತ್ರಿಕ್ಕರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿತು. ಪ್ರತಿ ತಿಂಗಳ ಮೂರನೇ ಶನಿವಾರ ಆಯೋಜಿಸಲಾಗುತ್ತಿರುವ ಸಾರ್ವಜನಿಕ ಶುಚೀಕರಣ ಯೋಜನೆಯನ್ವಯ ಅಂಗವಾಗಿ ಶುಚೀಕರನ ಚಟುವಟಿಕೆಗಳನ್ನು ನಡೆಸಲಾಯಿತು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಇ.ಎಂ. ಆನಂದವಲ್ಲಿ ಅವರು ಪಂಚಾಯಿತಿ ಮಟ್ಟದ ಉದ್ಘಾಟನೆ ನೆರವೇರಿಸಿದರು. ವಿವಿಧ ವಾರ್ಡ್‍ಗಳಲ್ಲಿನ ಸಾರ್ವಜನಿಕ ಸ್ಥಳಗಳು, ಸರ್ಕಾರಿ ಸಂಸ್ಥೆಗಳು, ಶಾಲೆಗಳು ಮತ್ತು ರಸ್ತೆಗಳನ್ನು ಕೇಂದ್ರೀಕರಿಸಿ ಸ್ವಚ್ಛತಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಹಸಿರು ಕ್ರಿಯಾ ಸೇನೆ ಸದಸ್ಯರು, ಕುಟುಂಬಶ್ರೀ ಕಾರ್ಯಕರ್ತರು, ಉದ್ಯೋಗ ಖಾತ್ರಿ ಕಾರ್ಮಿಕರು ಮೊದಲಾದವರು ಪಾಲ್ಗೊಂಡಿದ್ದರು.





