ಕಾಸರಗೋಡು: ಡೆಪ್ಯುಟಿ ತಹಸೀಲ್ದಾರ್‍ಗೆ ತಡೆದು ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಜೇಶ್ವರದ ಹಾಲಿ ಶಾಸಕ ಎ.ಕೆ.ಎಂ ಅಶ್ರಫ್ ಸೇರಿದಂತೆ ಮೂರು ಮಂದಿಗೆ ಕಾಸರಗೋಡಿನ ನ್ಯಾಯಾಲಯ ತಲಾ ಮೂರು ತಿಂಗಳ ಜೈಲು ಶಿಕ್ಷೆ ಹಾಗೂ 20ಸವಿರ ರೂ. ದಂಡ ವಿಧಿಸಿ ತೀರ್ಪಿತ್ತಿದೆ. ದಂಡ ಪಾವತಿಸದಿದ್ದಲ್ಲಿ ಅಪರಾಧಿಗಳು ಒಂದು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.
ಹದಿನೈದು ವರ್ಷಗಳ ಹಿಂದೆ ಮಂಜೇಶ್ವರದಲ್ಲಿ ಹಲ್ಲೆ ಪ್ರಕರಣ ನಡೆದಿದ್ದು, ಎ.ಕೆ.ಎಂ ಅಶ್ರಫ್ ಅಲ್ಲದೆ, ಐಯುಎಂಎಲ್ ಕಾರ್ಯಕರ್ತ ಬಶೀರ್‍ಅಬ್ದುಲ್ಲ, ಅಬ್ದುಲ್ ಖಾದರ್ ಯಾನೆ ಕಾಯಿಞÂ ಎಂಬವರ ವಿರುದ್ಧ ಮಂಜೇಶ್ವರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ತೀರ್ಪಿನ ವಿರುದ್ಧ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸುವುದಾಗಿ ಶಾಸಕ ಎ.ಎಕೆ ಎಂ ಅಶ್ರಫ್ ತಿಳಿಸಿದ್ದಾರೆ.




