ಕಾಸರಗೋಡು: ನಗರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಸನಿಹದ ಶ್ರೀ ಗುರು ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ಸಂಪೂಜ್ಯ ಶ್ರೀ ಗುರು ರಾಘವೇಂದ್ರ ಸಾರ್ವಭೌಮರ 354 ನೇ ಆರಾಧನಾ ಮಹೋತ್ಸವ ಕಾರ್ಯಕ್ರಮವು 2025 ಆಗಸ್ಟ್ 11 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.
ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರುಗಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಹೋಟೆಲ್ ಉದ್ಯಮಿ ರಾಮ್‍ಪ್ರಸಾದ್, ಅಶೋಕ ನಾಯ್ಕ್, ಕೆ. ಜಗದೀಶ್ ಕೂಡ್ಲು, ಗುರುಪ್ರಸಾದ್ ಕೋಟೆಕಣಿ, ಕಿಶೋರ್ ಕುಮಾರ್, ಪ್ರದೀಪ್ ಬೇಕಲ್, ಸೂರ್ಯಕಾಂತಿ, ನಗರಸಭಾ ಸದಸ್ಯೆ ಶ್ರೀಲತಾ ಟೀಚರ್, ರೂಪಕಲಾ ಹೊಳ್ಳ, ಸವಿತಾ ಕಿಶೋರ್, ಶ್ರೀದೇವಿ, ಸೌಮ್ಯ ಮೊದಲಾದವರು ಉಪಸ್ಥಿತರಿದ್ದರು.





