HEALTH TIPS

ಪಶ್ಚಿಮ ಬಂಗಾಳ: ಸಂದೇಶ್‌ಖಾಲಿ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ; ಎಫ್‌ಐಆರ್‌ ದಾಖಲು

 ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದ್ದು ಪ್ರಕರಣದ ಮುಖ್ಯ ಆರೋಪಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮುಖಂಡ ಶಹಜಹಾನ್‌ ಶೇಖ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ.

ಶಹಜಹಾನ್‌ ಶೇಖ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಖಚಿತಪಡಿಸಿದ್ದಾರೆ.

2019ರ ಲೋಕಸಭಾ ಚುನಾವಣಾ ನಂತರದ ಸಂದೇಶ್‌ಖಾಲಿಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರಾದ ಪ್ರದೀಪ್ ಮೊಂಡಲ್, ದೇವದಾಸ್ ಮೊಂಡಲ್ ಮತ್ತು ಸುಕಾಂತ ಮೊಂಡಲ್ ಅವರನ್ನು ಹತ್ಯೆ ಮಾಡಲಾಗಿತ್ತು. ನಂತರ ನಡೆದ ಪ್ರತಿಭಟನೆಗಳು ಹಾಗೂ ಹಿಂಸಾಚಾರದಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಎಸಲಾಗಿತ್ತು. ಇದೀಗ ಈ ಪ್ರಕರಣವನ್ನು ಸಿಬಿಐ ತನಿಖೆ ಮಾಡಲಿದೆ.

ಹಿಂದೆ ಈ ಪ್ರಕರಣವನ್ನು ಪಶ್ಚಿಮ ಬಂಗಾಳ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಸಂತ್ರಸ್ತರ ಕುಟುಂಬಗಳು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ಮನವಿ ಮಾಡಿದ್ದವು.

ಇದು ಗಂಭೀರ ಪ್ರಕರಣವಾಗಿದ್ದು ತನಿಖೆಯನ್ನು ಸಿಬಿಐಗೆ ವಹಿಸಿಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಜೂನ್ 30ರಂದು ಸರ್ಕಾರಕ್ಕೆ ಸೂಚನೆ ನೀಡಿತ್ತು.

ಸಂದೇಶ್‌ಖಾಲಿ ಭೂವ್ಯವಹಾರಕ್ಕೆ ಸಂಬಂಧಿಸಿದಂತೆ ಶೇಖ್‌ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2024ರ ಜನವರಿ 5ರಂದು ಬಂಧಿಸಿದ್ದರು. ಸದ್ಯ ಶೇಖ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries