ಕೊಚ್ಚಿ: ಹಿಂದೂ ಉತ್ತರಾಧಿಕಾರ ಕಾಯ್ದೆಯ ಕುರಿತು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕೇರಳದ ಹಿಂದೂ ಕುಟುಂಬಗಳ ಪೂರ್ವಜರ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಹಕ್ಕುಗಳಿವೆ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ನ್ಯಾಯಮೂರ್ತಿ ಈಶ್ವರನ್ ಮಹತ್ವದ ತೀರ್ಪು ನೀಡಿದ್ದಾರೆ. ಡಿಸೆಂಬರ್ 20, 2004 ರ ನಂತರ ಮರಣ ಹೊಂದಿದವರ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಹಕ್ಕುಗಳನ್ನು ನೀಡಲೇಬೇಕೆಂದು ಆದೇಶ ನೀಡಲಾಗಿದೆ.
1975 ರ ಕೇರಳ ಜಂಟಿ ಕುಟುಂಬ ನಿರ್ಮೂಲನಾ ಕಾಯ್ದೆ ಜಾರಿಯಲ್ಲಿಲ್ಲ ಎಂದು ನ್ಯಾಯಾಲಯ ಹೇಳಿದೆ.





