HEALTH TIPS

ಇಸ್ರೇಲ್ ಅಪರಾಧದಲ್ಲಿ ಭಾಗಿಯಾದ ದೇಶಗಳ ಜೊತೆ ಭಾರತ ಸೇರದಿರಲಿ: ಪ್ರಧಾನಿಗೆ ಓವೈಸಿ

ಹೈದರಾಬಾದ್: ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ನರ ವಿರುದ್ಧ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂದು ಆರೋಪಿಸಿರುವ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಭಾರತವು ಆ ಅಪರಾಧಗಳಲ್ಲಿ ಭಾಗಿಯಾಗಿರುವ ದೇಶಗಳೊಂದಿಗೆ ಸೇರದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಭಾರತವು ಸದಾ ಪ್ಯಾಲೆಸ್ಟೀನಿಯನ್ನರನ್ನು ಬೆಂಬಲಿಸಿದ್ದು, ಇಸ್ರೇಲ್ ನರಮೇಧವನ್ನು ವಿರೋಧಿಸಿದೆ ಎಂದು ಹೇಳಿದ್ದಾರೆ.

ಗಾಜಾದಲ್ಲಿ ಪ್ಯಾಲೆಸ್ಟೀನಿಯನ್ನರ ವಿರುದ್ಧ ಇಸ್ರೇಲ್ ನರಮೇಧವನ್ನು ನಡೆಸುತ್ತಿದೆ. ಇಸ್ರೇಲ್‌ನ ಅಪರಾಧಗಳಲ್ಲಿ ಭಾಗಿಯಾಗಿರುವ ದೇಶಗಳೊಂದಿಗೆ ಭಾರತ ಸೇರದಂತೆ ಪ್ರಧಾನಿ ನರೇಂದ್ರ ಮೋದಿ ಖಚಿತಪಡಿಸಬೇಕು. ಭಾರತ ಯಾವಾಗಲೂ ಪ್ಯಾಲೆಸ್ಟೀನಿಯರನ್ನು ಬೆಂಬಲಿಸಿದೆ. ಇಸ್ರೇಲ್ ಹತ್ಯಾಕಾಂಡವನ್ನು ವಿರೋಧಿಸಿದೆ'ಎಂದು ಓವೈಸಿ ಹೇಳಿದ್ದಾರೆ.

ಇದೇವೇಳೆ, ಇಸ್ರೇಲ್ ನರಮೇಧದ ವಿರುದ್ಧ ನಿರ್ಣಾಯಕ ಕ್ರಮ ಅಗತ್ಯ ಎಂದು ತಿಳಿಸಿದ್ದಾರೆ.

ಪ್ಯಾಲೆಸ್ಟೀನ್ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸಿ ಓವೈಸಿ ಈ ಹಿಂದೆ ಹಲವು ಬಾರಿ ಹೇಳಿಕೆಗಳನ್ನು ನೀಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries