ಕಾಸರಗೋಡು: ಮುಳಿಯಾರ್ ಪಂಚಾಯಿತಿಯ ಪೇರಡ್ಕದ ಪಯಸ್ವಿನಿ ಅರಣ್ಯ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಅರಣ್ಯ ಪ್ರದೇಶದ ವಿವಿಧ ಭಾಗಗಳಲ್ಲಿ ಹಣ್ಣು ಕೊಡುವ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಹಸಿರು ಭಾರತ ಮಿಷನ್ ಅಂಗವಾಗಿಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪಯಸ್ವಿನೀ ಅರಣ್ಯ ಸಂರಕ್ಷಣಾ ಸಮಿತಿ ಸದಸ್ಯರ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 5000ಕ್ಕೂ ಹೆಚ್ಚು ಹಣ್ಣಿನ ಮರಗಳ ಸಸಿಗಳನ್ನು ನೆಡಲಾಯಿತು. ಪಯಸ್ವಿನಿ ಅರಣ್ಯ ಸಂರಕ್ಷಣಾ ಸಮಿತಿ ಅಧ್ಯಕ್ಷ ಪಿ. ರಾಧಾಕೃಷ್ಣನ್ ಹಣ್ಣಿನ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅರಣ್ಯ ರಕ್ಷಕ ಸುನಿಲ್, ಸಮಿತಿ ಸದಸ್ಯರು ಉಪಸ್ಥಿತರಿದ್ದರು.





