ನವದೆಹಲಿ: ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ಸಂಜೆ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣದಿಂದ ಹಾರಾಟವನ್ನು ರದ್ದು ಮಾಡಲಾಗಿದೆ. ವಿಮಾನದಲ್ಲಿ ಸುಮಾರು 160 ಪ್ರಯಾಣಿಕರಿದ್ದರು ಎಂದು ಮೂಲವೊಂದು ತಿಳಿಸಿದೆ.
ದೆಹಲಿಯಿಂದ ಹೊರಡಬೇಕಿದ್ದ ವಿಮಾನವೊಂದರ ಸಿಬ್ಬಂದಿ ಸಣ್ಣ ತಾಂತ್ರಿಕ ಸಮಸ್ಯೆಯನ್ನು ಉಲ್ಲೇಖಿಸಿ ಪ್ರಯಾಣವನ್ನು ಸುರಕ್ಷತೆಯ ದೃಷ್ಟಿಯಿಂದ ರದ್ದು ಮಾಡಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರ ಹೇಳಿದ್ದಾರೆ. ಕಾಕ್‌ಪಿಟ್‌ನಲ್ಲಿ ವೇಗವನ್ನು ಪ್ರದರ್ಶಿಸುವ ಪರದೆಗಳಲ್ಲಿ ದೋಷ ಕಂಡುಬಂದಿದ್ದರಿಂದ ಪೈಲಟ್ ಹಾರಾಟವನ್ನು ಅನ್ನು ರದ್ದು ಮಾಡಲು ನಿರ್ಧರಿಸಿದರು ಎಂದು ಮೂಲವೊಂದು ತಿಳಿಸಿದೆ.




