ಪೆರ್ಲ: ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಮತ್ತು ಅರ್ಥಶಾಸ್ತ್ರ ವಿಭಾಗದ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು. ವ್ಯವಹಾರ ಅಧ್ಯಯನ ವಿಭಾಗದ ಉಪನ್ಯಾಸಕಿ ಮಧುಶ್ರೀ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ.ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಆಶಾಲತಾ, ವ್ಯವಹಾರ ಅಧ್ಯಯನ ವಿಭಾಗದ ಉಪನ್ಯಾಸಕಿ ನಿಷ್ಮಿತ, ಎಸ್ಸೆಸ್ಸೆಸ್ ಸಹಾಯಕ ಯೋಜನಾಧಿಕಾರಿ ಅಶ್ವಿನಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸನುಶಾ ಸ್ವಾಗತಿಸಿ, ಅಂಜಲಿ ವಂದಿಸಿದರು. ರೀಷ್ಮಾ ನಿರೂಪಿಸಿದರು.

.jpg)
