ಮಂಜೇಶ್ವರ: ದೇಶೀಯ ಅಧ್ಯಾಪಕ ಪರಿಷತ್ ಎನ್.ಟಿ.ಯು ಮಂಜೇಶ್ವರ ಉಪಜಿಲ್ಲಾ ವತಿಯಿಂದ ಗುರುವಂದನಾ ಕಾರ್ಯಕ್ರಮ ಕೊಮ್ಮೆ ತಿಮ್ಮಣ್ಣ ಭಟ್ ಇವರ ಸ್ವಗೃಹದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್.ಟಿ.ಯು. ಮಂಜೇಶ್ವರ ಉಪಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಟೀಚರ್ ವಹಿಸಿ ಶುಭ ಹಾರೈಸಿದರು.
ಕೋಳ್ಯೂರು ಶ್ರೀಶಂಕರನಾರಾಯಣ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಕೊಮ್ಮೆ ತಿಮ್ಮಣ್ಣ ಭಟ್ ಇವರನ್ನು ಶಾಲು ಹೊದಿಸಿ, ಫಲ-ಪುಷ್ಪ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಗೋಪಾಲ ಕೃಷ್ಣ ಭಟ್ ಕಾನ ಸನ್ಮಾನಿತರ ಬಗ್ಗೆ ಮಾತನಾಡಿದರು. ಗ್ರಾ.ಪಂ. ಸದಸ್ಯ ನಾರಾಯಣ ತುಂಗಾ, ಎನ್.ಟಿ.ಯು. ರಾಜ್ಯ ಸಮಿತಿ ಸದಸ್ಯ ಅರವಿಂದಾಕ್ಷ ಭಂಡಾರಿ ಹಾಗೂ ಸನ್ಮಾನಿತರ ಸುಪುತ್ರ ಕಿಶೋರ್ ಭಟ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿ.ಎಚ್.ಎಸ್ ಮೂಡಂಬೈಲ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಸುಬ್ಬಣ್ಣ ಭಟ್ ಉಪಸ್ಥಿತರಿದ್ದರು. ಎನ್.ಟಿ.ಯು. ರಾಜ್ಯ ಸಮಿತಿ ಸದಸ್ಯ ಸತೀಶ್ ಶೆಟ್ಟಿ ಒಡ್ಡoಬೆಟ್ಟು ಸ್ವಾಗತಿಸಿ, ನಿರೂಪಿಸಿದರು. ಜಿಲ್ಲಾ ಸದಸ್ಯ ಈಶ್ವರ್ ಕಿದೂರು ವಂದಿಸಿದರು.




.jpg)
