ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರರ ಐದನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಜುಲೈ 11 ರಂದು ಸಂಜೆ 6ಕ್ಕೆ ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕøತಿಕ ಪ್ರತಿಷ್ಠಾನ ವತಿಯಿಂದ 'ಕೃಷ್ಣ ಸಾರಥ್ಯ ಸ್ವೀಕಾರ'ಯಕ್ಷಗಾನ ತಾಳಮದ್ದಳೆ ಜರುಗಲಿರುವುದು.ಹಿಮ್ಮೇಳದಲ್ಲಿ ಭಾಗವತರಾಗಿ ಕಾವ್ಯಶ್ರೀ ನಾಯಕ್ ಆಜೇರು, ಅಡೂರು ಲಕ್ಷ್ಮೀನಾರಾಯಣ ರಾವ್, ಲವಕುಮಾರ್ ಐಲ. ,ಉ,,ಏಳದಲ್ಲಿ ಹಿರಣ್ಯ ವೆಂಕಟೇಶ್ವರ ಭಟ್, ಉಜಿರೆ ಅಶೊಕ್ ಭಟ್, ಶೇಣಿ ವೇಣುಗೋಪಾಲ ಭಟ್, ಕೇಕಣಾಜೆ ಕೇಶವ ಭಟ್ ಸಹಕರಿಸುವರು.
12ರಂದು ಸಂಜೆ 6ಕ್ಕೆ ಬೆಂಗಳೂರಿನ ಸಮನ್ವಯ ಕಲಾಕೇಂದ್ರದ ವಿದ್ವಾನ್ ತಿರುಮಲ ಶ್ರೀನಿವಾಸ್ ಅವರ ನಿರ್ದೇಶನದಲ್ಲಿ ಸಂಗೀತ ವೈವಿಧ್ಯ ನಡೆಯುವುದು. 13ರಂದು ಮಧ್ಯಾಹ್ನ 2ರಿಂದ ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ಅವರ ಸ್ಮರಣಾಂಜಲಿ ಅಂಗವಾಗಿ ಸಭಾ ಕಾರ್ಯಕ್ರಮ ನಡೆಯುವುದು. ನಂತರ ಶ್ರೀ ಧರ್ಮಸ್ಥಳ ಮೇಳದ ಅವರ ಒಡನಾಡಿ ಕಲಾವಿದರಿಂದ ಯಕ್ಷಗಾನ ಬಯಲಾಟ ನಡೆಯಲಿರುವುದು.

