ಲಂಡನ್: ಎಲ್ಲ ವ್ಯಾಪಾರ ಒಪ್ಪಂದಗಳನ್ನು ಸ್ಥಗಿತಗೊಳಿಸುವ ಬೆದರಿಕೆ ಹಾಕುವ ಮೂಲಕ ಸಕಾಲಕ್ಕೆ ಮಧ್ಯಪ್ರವೇಶಿಸಿದ್ದರಿಂದ ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದವು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿದ್ದಾರೆ.
ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಅವರೊಂದಿಗಿನ ಮಾತುಕತೆಗೂ ಮುನ್ನ ಸ್ಕಾಟ್ಲೆಂಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, 'ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಜಗತ್ತಿನ ಆರು ಪ್ರಮುಖ ಯುದ್ಧಗಳನ್ನು ತಡೆಯಲಾಗಿದೆ' ಎಂದಿದ್ದಾರೆ.




