ಬದಿಯಡ್ಕ: ಬಾಲಗೋಕುಲ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು. ಬದಿಯಡ್ಕ ಗಣೇಶ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಗೋಕುಲ ಕಾಸರಗೋಡು ಜಿಲ್ಲಾಧ್ಯಕ್ಷ ದಿನೇಶ್ ಮಾಸ್ತರ್ ಕೆಡೆಂಜಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ನರಸಿಂಹ ಶೆಣೈ ಬದಿಯಡ್ಕ ಅಧ್ಯಕ್ಷತೆ ವಹಿಸಿದರು. ಜಯರಾಮ ಬದಿಯಡ್ಕ, ಭಾಸ್ಕರ ಎನ್, ದಾಮೋದರ ಚೆಟ್ಟಿಯಾರ್ ಸಹಿತ ಹಲವು ಗಣ್ಯರು ಭಾಗವಹಿಸಿದರು. ರಾಜೇಶ್ ಬಿ.ಕೆ.ಸ್ವಾಗತಿಸಿ, ಲಲಿತ ಸಂಜೀವ ವಂದಿಸಿದರು.





