HEALTH TIPS

ಕೋಟೆಕಣಿಯಲ್ಲಿ ಯಕ್ಷಗಾನ ತರಬೇತಿ ಸಮಾರೋಪ, ಯಕ್ಷಗಾನ ಬಯಲಾಟ

ಕಾಸರಗೋಡು: ಗಂಡುಮೆಟ್ಟಿನ ಕಲೆ ಯಕ್ಷಗಾನದ ಬೆಳವಣಿಗೆಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ತರವಾದುದು ಎಂಬುದಾಗಿ ಕಾಸರಗೋಡು ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಕಲಾಸಂಘದ ವ್ಯವಸ್ಥಾಪಕ ಡಾ. ಕೆ.ಎನ್ ವೆಂಕಟ್ರಮಣ ಹೊಳ್ಳ ತಿಳಿಸಿದ್ದಾರೆ. 

ಅವರು ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ವತಿಯಿಂದ ಬೆಂಗಳೂರಿನ ಕರ್ನಾಟಕ ಯಕ್ಷಗಾನ ಅಕಾಡಮಿ ಸಹಯೋಗದೊಂದಿಗೆ ಕೋಟೆಕಣಿ ಶ್ರೀರಾಮನಾಥ ಸಾಂಸ್ಕøತಿಕ ಭವನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಯಕ್ಷಗಾನ ತರಬೇತಿ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಯಕ್ಷಗಾನಅಕಾಡಮಿ ಸದಸ್ಯ, ಯಕ್ಷಗಾನ ಕಲಾವಿದ ಸತೀಶ ಅಡಪ ಸಂಕಬೈಲು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.  ಯಕ್ಷಗುರು ಜಯರಾಮ ಪಾಟಾಳಿ ಪಡುಮಲೆ ಹಾಗೂ ಯಕ್ಷಗಾನ ಕಲಾವಿದ, ಪತ್ರಕರ್ತ  ವೇಣುಗೋಪಾಲ ಶೇಣಿ ಅಬ್ಯಾಗತರಾಗಿ ಭಾಗವಹಿಸಿದ್ದರು. ಯಕ್ಷಗಾನ ತರಬೇತಿ ಪೂರೈಸಿದ ಅಭ್ಯರ್ಥಿಗಳಿಗೆ ಸಂಕಬೈಲ್ ಸತೀಶ್ ಅಡಪ ಪ್ರಮಾಣಪತ್ರ ವಿತರಿಸಿದರು. ಗುರುಪ್ರಸಾದ್ ಕೋಟೆಕಣಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು.  ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಪ್ರಮಿಳಾ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ಗಜೇಂದ್ರ ಮೋಕ್ಷ ಯಕ್ಷಗಾನ ಬಯಲಾಟ ಜರುಗಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries