ಕಾಸರಗೋಡು: ಚೆರುವತ್ತೂರಿನ ವೀರಮಲೆ ಬೆಟ್ಟದ ರಾಷ್ಟ್ರೀಯ ಹೆದ್ದಾರಿ 66ರ ಷಟ್ಪಥ ನಿರ್ಮಾಣ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿಹನ ಸಂಚಾರ ಸ್ಥಗಿತಗೊಂಡಿದ್ದು ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ. ಮಡಕ್ಕರ ಕೊಟ್ಟಪ್ಪುರಂ ಮೂಲಕ ನೀಲೇಶ್ವರ ಹಾದಿಯಾಗಿ ವಾಹನಗಳನ್ನು ಬಿಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಮಣ್ಣು ತೆರವುಗೊಳಿಸುವ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ರಸ್ತೆನಿರ್ಮಾಣ ಕಂಪನಿಯ ಜೆಸಿಬಿ ಮತ್ತು ಕ್ರೇನ್ ಬಳಸಿ ಮಣ್ಣು ತೆಗೆಯುವ ಕಾರ್ಯಕ್ಕೆ ಬಳಸಲಾಗುತ್ತಿದೆ.
ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಅವರ ಸೂಚನೆ ಮೇರೆಗೆ ಎನ್‍ಡಿಆರ್‍ಎಫ್ ತಂಡ ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿದೆ. ಚೆರುವತ್ತೂರ್ ಮಯಿಚ್ಚ ವೀರಮಲೆ ಬೆಟ್ಟ ಪ್ರದೇಶಗಳಿಗೆ ಶಾಸಕ ಎಂ. ರಾಜಗೋಪಾಲನ್, ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್, ಮಾಜಿ ಸಂಸದ ಪಿ. ಕರುಣಾಕರನ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ವಿಜಯ್ ಭರತ್ ರೆಡ್ಡಿ, ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಮಾಧವನ್ ಮಣಿಯಾರ, ಚೆರುವತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿ.ವಿ.ಪ್ರಮೀಳಾ, ಆರ್‍ಡಿಒ ಬಿನು ಜೋಸೆಫ್, ಹೊಸದುರ್ಗ ತಹಸೀಲ್ದಾರ್ ಜಿ.ಸುರೇಶಬಾಬು ಮತ್ತಿತರರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.


