ಕಾಸರಗೋಡು: ಗಡಿನಾಡು ಕಾಸರಗೋಡಿನಲ್ಲಿ ಕನ್ನಡದ ಅಸ್ತಿತ್ವವನ್ನು ಭದ್ರಪಡಿಸಲು ಕನ್ನಡ ಪತ್ರಕರ್ತರು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆಂದು ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ, ನಿವೃತ್ತ ಶಿಕ್ಷಕ ವಿಶಾಲಾಕ್ಷ ಪುತ್ರಕಳ ಹೇಳಿದರು.
ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ಆಶ್ರಯದಲ್ಲಿ ಮಂಗಳವಾರ ಸಂಜೆ ನಡೆದ 182 ನೇ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡ ಹೋರಾಟಕ್ಕೆ ಶಕ್ತಿ ತುಂಬುವಲ್ಲಿ ಕಾಸರಗೋಡಿನ ಪತ್ರಿಕೆಗಳ ಕೊಡುಗೆ ಗಣನೀಯವಾದುದು. ಕನ್ನಡ ಪತ್ರಕರ್ತರು ಹೋರಾಟದಲ್ಲಿ ಸಕ್ರಿಯರಾದರು. ವರದಿ, ಲೇಖನಗಳ ಮೂಲಕ ಜಾಗೃತಿ ಮೂಡಿಸಿ ಸರ್ವ ಕನ್ನಡಿಗರನ್ನು ಬಡೆದೆಬ್ಬಿಸಿದರು. ಪತ್ರಿಕೆಗಳು ಕನ್ನಡದ ಅವಗಣನೆಯ ವಿರುದ್ಧ ಧ್ವನಿಯೆತ್ತುತ್ತಲೇ ಇವೆ ಎಂದರು.
ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ ಪತ್ರಕರ್ತ ವೀಜೀ ಕಾಸರಗೋಡು ಮಾತನಾಡಿ, ಕಾಸರಗೋಡಿನಲ್ಲಿ ಕನ್ನಡ ಪತ್ರಕರ್ತರು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು. ಇನ್ನೋರ್ವ ಅಭ್ಯಾಗತ ಪತ್ರಕರ್ತ ಜಯ ಮಣಿಯಂಪಾರೆ ಅವರು ಮಾತನಾಡಿ, ಯುವಜನರು, ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕೆಂದರು. ಕೆ.ಸಿ.ಎನ್.ಚಾನೆಲ್‍ನ ಕಾರ್ಯಕ್ರಮ ನಿರೂಪಕಿ ಜಯಶ್ರೀ ಆರ್ಯಾಪು ಉಪಸ್ಥಿತರಿದ್ದು, ಶುಭಹಾರೈಸಿದರು. ಸಾಮಾಜಿಕ, ಧಾರ್ಮಿಕ ಮುಂದಾಳು ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ, ಲೇಖಕ ಅಶೋಕ್ ಕೆ. ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸಂಘಟಕ ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ವಂದಿಸಿದರು.




.jpg)
.jpg)
