ಕಾಸರಗೋಡು: ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ 15ರ ಹರೆಯದ ವಿದ್ಯಾರ್ಥಿನಿ ಮಗುವಿಗೆ ಜನ್ಮನೀಡಿದ್ದು, ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ರಕ್ತದೊತ್ತಡ ಕಂಡುಬಂದಿರುವ ಹಿನ್ನೆಲೆಯಲ್ಲಿ ಮಗು ಮತ್ತು ಬಾಣಂತಿ ಬಾಲಕಿಯನ್ನು ಕಾಞಂಗಾಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಸಂದರ್ಭ ಮಾಹಿತಿ ಬಹಿರಂಗಗೊಂಡಿದೆ. ಆಸ್ಪತ್ರೆ ಅಧಿಕಾರಿಗಳು ನೀಡಿದ ಮಾಹಿತಿಯನ್ವಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಬಾಲಕಿ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ.


