ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಐದನೇ ಚಾತುರ್ಮಾಸ್ಯ ವ್ರತಾಚರಣೆ ಹಿನ್ನೆಲೆಯಲ್ಲಿ ಕಾಸರಗೋಡು ವಲಯ ಸಮಿತಿ ವತಿಯಿಂದ ಹಸಿರುವಾಣಿ ಸಮರ್ಪಣಾ ಮೆರವಣಿಗೆ ಜುಲೈ 27ರಂದು ಜರುಗಲಿದೆ. ಬೆಳಗ್ಗೆ 9ಕ್ಕೆ ಕಾಸರಗೋಡು ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನ ವಠಾರದಿಂದ ಹಸಿರುವಾಣಿ ಸಮರ್ಪಣಾ ಮೆರವಣಿಗೆ ಆರಂಭಗೊಳ್ಳುವುದು. ಶ್ರೀ ಮಠದಲ್ಲಿ ಅಂದು ಬೆಳಗ್ಗೆ 8.30ಕ್ಕೆ ಶ್ರೀಕೋಮರಾಡಿ ದೈವಸ್ಥಾನ ಭಜನಾಸಂಘ, 10.30ಕ್ಕೆ ಪೇಟೆ ಶ್ರೀ ವೆಂಕಟ್ರಮಣ ಸ್ವಾಮಿ ಮಹಿಳಾ ಭಜನಾಮಂಡಳಿಯಿಂದ ಭಜನೆ, 12.30ಕ್ಕೆ ಶ್ರೀ ವೆಂಕಟ್ರಮಣ ಬಾಲಗೋಕುಲ ಮಕ್ಕಳಿಂದ ಕುಣಿತ ಭಜನೆ, ಮಧ್ಯಾಹ್ನ 12.30ರಿಂದ ಹರಿದಾಸ ದಯಾನಂದ ಹೊಸದುರ್ಗ ಅವರಿಂದ ಹರಿಕಥೆ ನಡೆಯುವುದು.





