HEALTH TIPS

ಉಗ್ರರ ದಾಳಿ: ಪರಿಹಾರ ವಿತರಣೆ ನೆರವಿಗೆ ವೆಬ್‌ ಪೋರ್ಟಲ್‌ ಅಭಿವೃದ್ಧಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಬಲಿಪಶುವಾದ ವ್ಯಕ್ತಿಗಳ ಕುಟುಂಬಗಳಿಗೆ ತ್ವರಿತವಾಗಿ ಪರಿಹಾರ ವಿತರಿಸಲು ಮತ್ತು ಅವರ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸಲು ಅನುಕೂಲವಾಗುವಂತೆ ವೆಬ್‌ ಪೋರ್ಟಲ್‌ ಅಭಿವೃದ್ಧಿಪಡಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಮಂಗಳವಾರ ಈ ಪೋರ್ಟಲ್‌ಗೆ ಚಾಲನೆ ನೀಡಿದರು.

'ಕೇಂದ್ರ ಗೃಹ ಸಚಿವಾಲಯವು, ರಾಷ್ಟ್ರೀಯ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಈ ಪೋರ್ಟಲ್‌ ಅಭಿವೃದ್ಧಿಪಡಿಸಿದೆ. ಉಗ್ರರ ದಾಳಿಯಿಂದ ನಲುಗಿದ ಕುಟುಂಬಗಳಿಗೆ ನೆರವು ಕಲ್ಪಿಸಲು ಬೇಕಿರುವ ಸಮಗ್ರ ದತ್ತಾಂಶವು ಈ ಪೋರ್ಟಲ್‌ನಲ್ಲಿ ಲಭಿಸಲಿದೆ' ಎಂದು ಮನೋಜ್‌ ಸಿನ್ಹಾ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಬಲಿಪಶುಗಳಾದ 40ಕ್ಕೂ ಹೆಚ್ಚು ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಜುಲೈ 13ರಂದು ಬಾರಾಮುಲ್ಲಾದಲ್ಲಿ ಉದ್ಯೋಗ ನೇಮಕಾತಿ ಪತ್ರಗಳನ್ನು ಸಿನ್ಹಾ ವಿತರಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries