ಮುಳ್ಳೇರಿಯ: ಎಡರಂಗ ಹಾಗೂ ಐಕ್ಯರಂಗವು ರಾಜ್ಯಕ್ಕೆ ಶಾಪವಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೆ ಅನ್ಯಾಯವೆಸಗುತ್ತ ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಹಿಂದೇಟು ಹಾಕುತ್ತಿರುವ ಎಡರಂಗ ಸರ್ಕಾರವು ರಾಜ್ಯದ ಜನರನ್ನು ವಂಚಿಸಿದೆ. ರಾಜ್ಯದಲ್ಲಿ ನಡೆಯಲಿರುವ ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷವು ನಿರ್ಣಾಯಕ ಪಕ್ಷವಾಗಲಿದೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಹೇಳಿದರು.
ಬಿಜೆಪಿ ಬದಿಯಡ್ಕ ಮಂಡಲ ಸಮಿತಿಯ ನೇತೃತ್ವದಲ್ಲಿ ಮುಳ್ಳೇರಿಯ ಗಣೇಶ ಕಲಾಮಂದಿರದಲ್ಲಿ ಶನಿವಾರ ಜರಗಿದ ವಿಕಸಿತ ಭಾರತ ಸಂಕಲ್ಪ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಪಕ್ಷವು ಎಲ್ಲೆಡೆ ಸಂಘಟಿತವಾಗಿ ಬಲಿಷ್ಠವಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಜನರೊಂದಿಗೆ ಬೆರೆಯಬೇಕು ಎಂದು ಅವರು ಕರೆಯಿತ್ತರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಭಾರಿ ವಿ.ಕೆ. ಸಜೀವನ್ ಮಾತನಾಡಿದರು. ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಮುಂಡೋಳುಮೂಲೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷೆ ಜನನಿ ಎಂ., ಕಾರಡ್ಕ ಗ್ರಾಮಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಭಟ್, ಜಿಲ್ಲಾ ಮಾಜಿ ಉಪಾಧ್ಯಕ್ಷ ಎಂ.ಸುಧಾಮ ಗೋಸಾಡ, ರಾಜ್ಯ ಕೌನ್ಸಿಲ್ ಸದಸ್ಯ ಶಿವಕೃಷ್ಣ ಭಟ್, ಮಾಜಿ ಮಂಡಲ ಅಧ್ಯಕ್ಷ ಹರೀಶ್ ನಾರಂಪಾಡಿ ಮೊದಲಾದ ಮಾತನಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಡ ಸ್ವಾಗತಿಸಿ, ಮಂಡಲ ಕಾರ್ಯದರ್ಶಿ ಹರೀಶ್ ಗೋಸಾಡ ವಂದಿಸಿದರು.




.jpg)
.jpg)
