ಕುಂಬಳೆ: ಬಿಜೆಪಿ ಕುಂಬಳೆ ಮಂಡಲ ಸಮಿತಿಯ ನೇತೃತ್ವದಲ್ಲಿ ಕುಂಬಳೆ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಭಾನುವಾರ ವಿಕಸಿತ ಭಾರತ ಸಂಕಲ್ಪ ಸಭೆಯನ್ನು ಆಯೋಜಿಸಲಾಯಿತು. ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಸರಗೋಡು ಜಿಲ್ಲಾ ಚುನಾವಣಾ ಪ್ರಭಾರಿ ವಕೀಲ ವಿ. ಕೆ. ಸಜೀವನ್ ಉದ್ಘಾಟಿಸಿದರು.
ಜಿಲ್ಲಾ ಕಾರ್ಯದರ್ಶಿ ಮತ್ತು ಮಂಡಲ ಪ್ರಭಾರಿ ಮಹೇಶ್ ಗೋಪಾಲ್ ಅವರು ಭವಿಷ್ಯದ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷ ಮುರಳೀಧರ ಯಾದವ್ ನಾಯ್ಕಾಪು, ಹಿರಿಯ ನಾಯಕರಾದ ವಕೀಲ ವಿ.ರವೀಂದ್ರನ್, ವಕೀಲ ಬಾಲಕೃಷ್ಣ ಶೆಟ್ಟಿ ಮತ್ತು ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ರೈ ಮಾತನಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ವಸಂತ ಕುಮಾರ್ ಮಯ್ಯ ಸ್ವಾಗತಿಸಿ, ಮಂಡಲ ಕಾರ್ಯದರ್ಶಿ ಪ್ರದೀಪ್ ಕುಮಾರ್ ವಂದಿಸಿದರು. ವಾರ್ಡ್ ಉಸ್ತುವಾರಿಗಳು ಮತ್ತು ವಾರ್ಡ್ ಮಟ್ಟದ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




.jpg)
.jpg)
