ಬೊಕಾರೊ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಇಂದು (ಬುಧವಾರ) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದ್ದು, ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿರ್ಹೋರ್ಡೆರಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ವೇಳೆ ಗುಂಡಿನ ಚಕಮಕಿ ನಡೆದಿದ್ದು ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮರಾದರೆ, ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹುತಾತ್ಮ ಯೋಧ ಸಿಪಿಆರ್‌ಎಫ್‌ನ ಕೋಬ್ರಾ ಬೆಟಾಲಿಯನ್‌ಗೆ ಸೇರಿದ್ದವರಾಗಿದ್ದಾರೆ ಎಂದು ಐಜಿ (ಬೊಕಾರೊ ) ಕ್ರಾಂತಿ ಕುಮಾರ್ ಗಡಿದೇಸಿ ಹೇಳಿದ್ದಾರೆ.
ಎನ್‌ಕೌಂಟರ್ ಬಳಿಕ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ವಿಂದರ್ ಸಿಂಗ್ ತಿಳಿಸಿದ್ದಾರೆ.
ಹತ್ಯೆಗೀಡಾದ ಮಾವೋವಾದಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.




