ನವದೆಹಲಿ: 'ಬಿಹಾರದಲ್ಲಿ ಕೈಗೆತ್ತಿಕೊಂಡಿರುವ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸುವ ಕಾರ್ಯವನ್ನು ದೇಶದುದ್ದಕ್ಕೂ ವಿಸ್ತರಿಸಬಾರದು' ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ.
ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ ಕಾರ್ಯವನ್ನು ದೇಶದಾದ್ಯಂತ ವಿಸ್ತರಿಸಲು ಚುನಾವಣಾ ಆಯೋಗವು ಕೆಲಸ ಆರಂಭಿಸಿದೆ ಎನ್ನಲಾಗುತ್ತಿದೆ.




