HEALTH TIPS

ಭಯೋತ್ಪಾದಕರ ಜತೆ ನಂಟು ಹೊಂದಿರುವ ಸರ್ಕಾರಿ ನೌಕರರ ವಿರುದ್ಧ ಕ್ರಮ; J&K ಸರ್ಕಾರ

ಶ್ರೀನಗರ: ಭಯೋತ್ಪಾದಕರೊಂದಿಗೆ ಗುರುತಿಸಿಕೊಂಡಿದ್ದಾರೆ ಎನ್ನಲಾದ ಸರ್ಕಾರಿ ನೌಕರರ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಭಯೋತ್ಪಾದನಾ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನಿರ್ದೇಶನ ನೀಡಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳ ಮೇಲೆ ನಿಗಾ ಇಡಲಾಗಿದ್ದು, ಅವರ ಚಟುವಟಿಕೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದಕ್ಕಾಗಿಯೇ 2021ರ ಏಪ್ರಿಲ್‌ನಲ್ಲಿ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ರಚಿಸಲಾಗಿದೆ.

ಸಂವಿಧಾನದ 311 (2) (ಸಿ) ವಿಧಿ ಅಡಿಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 80 ಸರ್ಕಾರಿ ನೌಕರರನ್ನು ವಜಾಗೊಳಿಸಲಾಗಿದೆ. ರಾಜ್ಯದ ಭದ್ರತೆಗೆ ಹಾನಿಯಾಗುವ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಿರುವುದು ಕಂಡುಬಂದರೆ, ವಿಚಾರಣೆಯಿಲ್ಲದೆ ಅವರನ್ನು ವಜಾಗೊಳಿಸಲು ಈ ವಿಧಿ ಅವಕಾಶ ಕಲ್ಪಿಸುತ್ತದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಸಿಐಡಿ) ನೇತೃತ್ವ ಐದು ಸದಸ್ಯರ ಎಸ್‌ಟಿಎಫ್ ತಂಡ ರಚಿಸಲಾಗಿದೆ. ಈ ತಂಡ ಭಯೋತ್ಪಾದನೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕಿತ ಸರ್ಕಾರಿ ನೌಕರರನ್ನು ಗುರುತಿಸುವುದು, ಪರಿಶೀಲಿಸುವುದು ಮತ್ತು ದಾಖಲೆಗಳನ್ನು ಸಂಗ್ರಹಿಸುವ ಅಧಿಕಾರವನ್ನು ಹೊಂದಿದೆ. ಕೂಲಂಕಷವಾಗಿ ಪರಿಶೀಲನೆ ನಡೆಸಿದ ಬಳಿಕ ಕಾರ್ಯಪಡೆಯು ತನ್ನ ಶಿಫಾರಸುಗಳನ್ನು ಸೂಕ್ತ ಕ್ರಮಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಗೆ ಕಳುಹಿಸುತ್ತದೆ, ಈ ಮೂಲಕ ಅವರನ್ನು ಸೇವೆಯಿಂದ ವಜಾಗೊಳಿಸಬಹುದು.

ಭದ್ರತಾ ಸಿಬ್ಬಂದಿ ಅಥವಾ ಜನನಿಬಿಡ ಪ್ರದೇಶಗಳ ಮೇಲಿನ ದಾಳಿಗಳನ್ನು ಯೋಜಿಸುವಲ್ಲಿ ಅಥವಾ ಸುಗಮಗೊಳಿಸುವಲ್ಲಿ ನೇರ ಅಥವಾ ಪರೋಕ್ಷವಾಗಿ ಕೆಲವು ಸರ್ಕಾರಿ ಉದ್ಯೋಗಿಗಳು ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ಇತರರು ಉಗ್ರಗಾಮಿ ನಿರ್ವಾಹಕರಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಲು ಅಧಿಕಾರವನ್ನು ಬಳಸಿಕೊಂಡಿದ್ದಾರೆ ಎಂದು ವರದಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

'ಸ್ವಚ್ಛ ಮತ್ತು ಜವಾಬ್ದಾರಿಯುತ ಆಡಳಿತದ ಅಗತ್ಯವಿದ್ದು, ಅಮಾಯಕರಿಗೆ ಹಾನಿ ಮಾಡುವ ಅಥವಾ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಲ್ಲಿ ತೊಡಗಿಕೊಂಡಿರುವವರನ್ನು ಬಿಡುವುದಿಲ್ಲ. ಅಂಥವರಿಗೆ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries