ಕಾಸರಗೋಡು: ಭಗವಾನ್ ಶ್ರೀ ಸತ್ಯಸಾಯಿ ಅಭಯನಿಕೇತನ್ ಮತ್ತು ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘ ಚಿತ್ತಾರಿ ವತಿಯಿಂದ ಉಚಿತ ಕನ್ನಡಕ ವಿತರಣಾ ಸಮಾರಂಭ ಆ, 10ರಂದು ಬೆಳಗ್ಗೆ 10.30ಕ್ಕೆ ಚಿತ್ತಾರಿ ಶ್ರೀ ಮಲ್ಲಿಕಾರ್ಜುನ ದೇವಳದ ಸಭಾಂಗಣದಲ್ಲಿ ಜರುಗಲಿದೆ.
ಭಗವಾನ್ ಶ್ರೀ ಸತ್ಯಸಾಯಿಬಾಬಾ ಅವರ ಜನ್ಮಶತಾಬ್ದಿ ವರ್ಷಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಫಲಾನುಭವಿಗಳಿಗೆ ಪ್ರಾಯೋಜಿತ ರೂಪದಲ್ಲಿ ಕನ್ನಡಕ ವಿತರಣೆ ನಡೆಯಲಿರುವುದು. ಭಗವಾನ್ ಶ್ರೀ ಸತ್ಯಸಾಯಿ ಅಭಯನಿಕೇತನ್ ಅಧ್ಯಕ್ಷ ಡಾ. ಎಸ್.ಬಿ ಖಂಡಿಗೆ ಅಧ್ಯಕ್ಷತೆ ವಹಿಸುವರು. ನಿವೃತ್ತ ಜಿಲ್ಲಾ ನ್ಯಾಯಾಧೀಶ ರಮಾಕಾಂತ್ ಬೇಕಲ್ ಹಾಗೂ ವಕೀಲ ಕೆ, ಉರಳೀಧರ ಬಳ್ಳಕ್ಕುರಾಯ ಮುಖ್ಯ ಅತಿಥಿಯಾಗಿ ಭಾಗವಹಿಸುವರು.





