HEALTH TIPS

2024ರಲ್ಲಿ ಭಾರತದ ಪೌರತ್ವ ತೊರೆದ 2 ಲಕ್ಷಕ್ಕೂ ಹೆಚ್ಚು ಮಂದಿ

ನವದೆಹಲಿ: 2024ರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಭಾರತದ ಪೌರತ್ವವನ್ನು ತೊರೆದಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದೆ.

ಈ ಕುರಿತು ಕಾಂಗ್ರೆಸ್‌ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಕೇಳಿದ ಪ್ರಶ್ನೆಗೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಲಿಖಿತ ಉತ್ತರ ನೀಡಿದ್ದಾರೆ.

'ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, 2020ರಲ್ಲಿ 85,256, 2021ರಲ್ಲಿ 1,63,370, 2022ರಲ್ಲಿ 2,25,620, 2023ರಲ್ಲಿ 2,16,219 ಮತ್ತು 2024ರಲ್ಲಿ 2,06,378 ಜನರು ಭಾರತದ ಪೌರತ್ವವನ್ನು ತೊರೆದಿದ್ದಾರೆ' ಎಂದು ಸಿಂಗ್ ಹೇಳಿದರು.

ಮುಂದುವರಿದು, '2011ರಲ್ಲಿ 1,22,819, 2012ರಲ್ಲಿ 1,20,923, 2013ರಲ್ಲಿ 1,31,405 ಮತ್ತು 2014ರಲ್ಲಿ 1,29,328 ಜನರು ಪೌರತ್ವ ತೊರೆದಿದ್ದಾರೆ' ಎಂದು ತಿಳಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಅಂಕಿ ಅಂಶಗಳ ಮಾಹಿತಿ ಪ್ರಕಾರ ಒಟ್ಟಾರೆ 3,43,56,193 ಭಾರತೀಯರು ವಿದೇಶಗಳಲ್ಲಿ ನೆಲೆಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries